ಕಾರ್ಕಳ: ರಾಜ್ಯ ಸರ್ಕಾರವು ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು ಇದರಿಂದ ರಾಜ್ಯದ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಆದರೆ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ಸಿನ ಸೌಲಭ್ಯ ಇಲ್ಲದ ಹಿನ್ನಲೆಯಲ್ಲಿ ಈ ಭಾಗದ ಮಹಿಳೆಯರು ಈ ಸವಲತ್ತಿನಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಸರ್ಕಾರಿ ಬಸ್ಸು ಸೌಲಭ್ಯ ಕಲ್ಪಿಸಬೇಕು ಹಾಗೂ ಸಧ್ಯ ತಾತ್ಕಾಲಿಕವಾಗಿ ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಡ್ತಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಿಗೆ ಕಡ್ತಲ ಪಂಚಾಯಿತಿ ಆಡಳಿತವು ಮನವಿ ಸಲ್ಲಿಸಿದೆ