ಕಾರ್ಕಳ : ಮಂಗಳೂರು ವಿಶ್ವವಿದ್ಯಾನಿಲಯದ MBA-ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 3 ನೇ ರ‍್ಯಾಂಕ್ ಪಡೆದ ನವೀನ್ ಆರ್ ಭಟ್ ಕುಕ್ಕುಜೆ ಅವರನ್ನು ಕಡ್ತಲ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್, ಉಪಾಧ್ಯಕ್ಷ ಸತೀಶ್ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವ ಪೂಜಾರಿ, ಕ್ಯಾಂಪ್ಕೋ ನಿರ್ದೇಶಕ ದಯಾನಂದ ಹೆಗಡೆ, ಲಕ್ಷ್ಮಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಮಲ್ಯ, ಪಂಚಾಯತ್ ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಹೆಗಡೆ, ಪ್ರಸನ್ನ ಶೆಟ್ಟಿ ಮುಂಡಾರು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
