ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುಕೇಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಲಕ್ಷ್ಮೀ ಅವಿರೋಧ ಆಯ್ಕೆ
ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಕೇಶ್ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 14 ಸದಸ್ಯಬಲದ ಕಡ್ತಲ ಪಂಚಾಯತಿಯಲ್ಲಿ 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು 2 ಕಾಂಗ್ರೆಸ್ ಹಾಗೂ 3 ಪಕ್ಷೇತರ ಸದಸ್ಯರ ಪೈಕಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾ ಅಧಿಕಾರಿಯಾಗಿ ನಾಗರಾಜ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು
ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಭಾರತಿ ದೇವಾಡಿಗ ಉಪಾಧ್ಯಕ್ಷರಾಗಿ ಪ್ರೇಮಾ ಅವಿರೋಧ ಆಯ್ಕೆ:
ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಗುರುವಾರ ನಡೆಯಿತು.ನೂತನ ಅಧ್ಯಕ್ಷರಾಗಿ ಭಾರತಿ ದೇವಾಡಿಗ ಉಪಾಧ್ಯಕ್ಷರಾಗಿ ಪ್ರೇಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
8 ಸದಸ್ಯಬಲದ ಶಿರ್ಲಾಲು ಪಂಚಾಯತ್ನಲ್ಲಿ 5 ಬಿಜೆಪಿ ಹಾಗೂ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಬಿಜೆಪಿ ಬೆಂಬಲಿತರು ಬಹುಮತ ಹೊಂದಿದ್ದ ಕಾರಣದಿಂದ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.





