ಕಾರ್ಕಳ: ತಾಲೂಕಿನ ಕಡ್ತಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022- 23ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಸ್ತರಣಾಧಿಕಾರಿ ವಿನಯ್ ಕುಮಾರ್ ಮಾತನಾಡಿ, ಹಾಲು ಉತ್ಪಾದಕರಿಗೆ ಹಾಲಿನ ಗುಣಮಟ್ಟವನ್ನು ಹೆಚ್ಚಿಸುವ ಕುರಿತು ಹಾಗೂ ರೈತರಿಗೆ ಇರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಸಂಘದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಶೆಣೈ ವರದಿವಾಚಿಸಿದರು. ಸಂಘದ ಉಪಾಧ್ಯಕ್ಷ ಪಾಂಡುರಂಗ ನಾಯಕ್, ಸಂಘದ ನಿರ್ದೇಶಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯ ಗೋವಿಂದರಾಜ ಭಟ್ ಸ್ವಾಗತಿಸಿ, ನಿರ್ದೇಶಕ ಅರುಣ್ ಕುಮಾರ್ ಹೆಗ್ಡೆ ವಂದಿಸಿದರು.




