ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಯಾಾಗಿದೆ. ಬೆಂಗಳೂರು ಬಂದ್ ನಡೆಸಿ ತೀವ್ರ ಆಕ್ರೋಶ ಹೊರಹಾಕಿದರೂ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದೆ.
ಕರ್ನಾಟಕ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ಪ್ರತಿ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಮುಂದಿನ 18 ದಿನ ತಮಿಳುನಾಡಿಗೆ ನೀರು ಬಿಡಲು ಆದೇಶ ನೀಡಿದೆ.
ಕಾವೇರಿ ನೀರು ಹರಿಸೋ ಸಂಬಂಧ ಹೊರಡಿಸಲಾಗಿದ್ದಂತ ಆದೇಶದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಇಂದು ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಕಚೇರಿಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ತಮಿಳುನಾಡು ಮತ್ತು ಕರ್ನಾಟಕದ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದರು.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದಿಂದ ಕಾವೇರಿ ಬರಿದಾಗಲಿದೆ. ಇಂದಿನ ಆದೇಶದಂತೆ ನೀರು ಹರಿಸಿದರೆ ಕೇವಲ 2.5 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಉಳಿಯಲಿದೆ. ಇದರಲ್ಲಿ 2 ಟಿಎಂಸಿ ನೀರು ಬಳಕೆಗೆ ಯೋಗ್ಯವಾಗಿರುವುದಿಲ್ಲ. ಹೀಗಾಗಿ ಅಕ್ಟೋಬರ್ ಆರಂಭದಿAದಲೇ ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಭಾಗದಲ್ಲಿ ನೀರಿನ ಕೊರತೆ ಕಾಡಲಿದೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಲಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಹೆಜ್ಜೆ ಹೆಜ್ಜೆಗೂ ಹಿನ್ನಡೆಯಾಗುತ್ತಿದೆ. ಕಾವೇರಿ ನದಿ ನೀರು ನಿಂಯತ್ರಣ ಸಮಿತಿ, ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ನಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಳೆ ಕೊರತೆಯಿಂದ ಕಾವೇರಿ ನದಿ ಒಡಲು ಬತ್ತಿದೆ. ಆದರೆ ತಮಿಳುನಾಡು ತನ್ನ ವಾದ ಮಂಡಿಸಿ ಕನ್ನಡಿಗರ ಕುಡಿಯುವ ನೀರನ್ನೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.