ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗಿದ್ದು, ರಾಷ್ಟ್ರೀಯ ಜನಹಿತ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ರಾಷ್ಟ್ರೀಯ ಜನಹಿತ ಪಕ್ಷಕ್ಕೆ ಚುನಾವಣೆ ಆಯೋಗವು ಕುಕ್ಕರ್ ಚಿಹ್ನೆ ನೀಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಮಂಜುನಾಥ್ ನಿನ್ನೆ ಕುಕ್ಕರ್ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಜನಹಿತ ಪಾರ್ಟಿಯ ಮಂಜುನಾಥ್, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಜನಹಿತ ಪಾರ್ಟಿಯ ಅಭ್ಯರ್ಥಿಗಳು 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದಾರೆ. ಸಮಾಜಮುಖಿ ಸೇವೆ ಸಲ್ಲಿಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಜನಹಿತ ಪಾರ್ಟಿಯಿಂದ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪಕ್ಷದಿಂದ ಶಿಕ್ಷಣ, ವೈದ್ಯಕೀಯ ಸೌಲಭ್ಯ, ಆರೋಗ್ಯ, ರೈತರ ಬೆಳೆಗೆ ಯೋಗ್ಯ ಬೆಂಬಲ ಬೆಲೆ ನಿಗದಿ, ಶುದ್ಧ ಕುಡಿಯುವ ನೀರು, 24 ಗಂಟೆಗಳ ಕಾಲ ಉಚಿತ ವಿದ್ಯುತ್, ಹೈನುಗಾರಿಕೆ, ತೋಟಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.