Share this news

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’ ಆಯ್ಕೆ ಆಗಿದ್ದಾರೆ,  ಉಪಮುಖ್ಯಮಂತ್ರಿಯಾಗಿ  ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ   ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ . ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಸಿದ್ದರಾಮಯ್ಯ ಡಿಕೆಶಿ ಪ್ರಬಲ ನಾಯಕರು. ಕಾಂಗ್ರೆಸ್ ಎನ್ನುವುದು ಪ್ರಜಾಪ್ರಭುತ್ವದ ಪಕ್ಷ ಎಂದು ಹೇಳಿದರು.

 ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮತ್ತೆ ಸಕಲ ಸಿದ್ದತೆ ಆರಂಭವಾಗಿದೆ. ಕರ್ನಾಟಕದ ಸಿಎಂ ಅಂತಿಮವಾಗದ ಹಿನ್ನೆಲೆ ನಿನ್ನೆ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತಗೊಂಡಿತ್ತು. ಇಂದು ಒಂದು ಹಂತದಲ್ಲಿ ಸಿಎಂ, ಡಿಸಿಎಂ ಆಯ್ಕೆ ಅಂತಿಮಗೊಂಡಿದ್ದು, ಶನಿವಾರ (ಮೇ 20 )ರಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ . ಈ ನಿಟ್ಟಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ಆರಂಭವಾಗಿದೆ. ಕ್ರೀಡಾಂಗಣದ ಸುತ್ತ ಬ್ಯಾರಿಕೇಡ್ ಅಳವಡಿಸುತ್ತಿರುವ ಕಾರ್ಮಿಕರು ಕ್ರೀಡಾಂಗಣವನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

 

Leave a Reply

Your email address will not be published. Required fields are marked *