ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ತುಳು ಭಾಷೆಯನ್ನು ದೇಶದ ಸಂವಿಧಾನದ 8 ನೇ ಪರಿಚ್ಚೇಧಕ್ಕೆ ಸೇರಿಸಬೇಕು ಎಂದು ಬೇಡಿಕೆಯಿದ್ದು, ಹಲವು ವರ್ಷಗಳಿಂದ ತುಳುವರಿಂದ ಪ್ರತಿಭಟನೆ ಕೂಡ ನಡೆದಿದೆ.
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.