ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಅಳೆದುತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಶನಿವಾರ ಮುಂಜಾನೆ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಪ್ರಥಮ ಹಂತದ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮಾಜಿ ಸಿಎಂ ಸ್ಪರ್ಧೆಯ ವಿಚಾರ ಅಂತಿಮಗೊAಡಿದ್ದು ಅವರು ವರುಣಾ ಕ್ಷೇತ್ರದಿಂದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ.
ಕರಾವಳಿಯ ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಕಾರ್ಕಳ,ಉಡುಪಿ ಹೊರತುಪಡಿಸಿ ಉಳಿದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಾಪು ಕ್ಷೇತ್ರದಿಂದ ವಿನಯಕುಮಾರ್ ಸೊರಕೆ, ಬೈಂದೂರು ಕ್ಷೇತ್ರಕ್ಕೆ ಗೋಪಾಲ ಪೂಜಾರಿ,ಕುಂದಾಪುರಕ್ಕೆ ಎಂ,ದಿನೇಶ್ ಹೆಗ್ಡೆ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ.
ಆದರೆ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕಾರ್ಕಳ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಗೊಂದಲ ಇನ್ನೂ ಮುಂದುವರಿದಿದೆ.ಈಗಾಗಲೇ ಮಂಜುನಾಥ ಪೂಜಾರಿ, ಡಿ,ಆರ್ ರಾಜು ಹಾಗೂ ಉದಯ ಶೆಟ್ಟಿ ಹೆಸರುಗಳು ಪ್ರಸ್ತಾಪವಾಗಿದ್ದು,ಈಗಾಗಲೇ ಅಭ್ಯರ್ಥಿ ಫೈನಲ್ ಮಾಡಲಾಗಿದೆ ಎನ್ನಲಾಗಿದ್ದು, ಎರಡನೇ ಪಟ್ಟಿಯಲ್ಲಿ ರಿಲೀಸ್ ಮಾಡಲಾಗುತ್ತದೆ ಎನ್ನಲಾಗುತ್ತಿದೆ