ನವದೆಹಲಿ :ರಾಜಕೀಯ ವಲಯದಲ್ಲಿ ತೀವೃ ಕುತೂಹಲಕ್ಕೆ ಎಡೆಮಾಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ರಾಜಕೀಯ ಪಕ್ಷಗಳ ರಣಕಲಿಗಳ ಹೋರಾಟಕ್ಕೆ ಚುನಾವಣಾ ಆಯೋಗ ವೇದಿಕೆ ಸಿದ್ಧಗೊಳಿಸಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎ.13 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಎ.20 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ಎ.21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.24 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ.10 ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಚುನಾವಣೆಗೆ ದಿನಾಂಕ ಘೊಷಣೆಯಾದ ಇಂದಿನಿAದಲೇ ಮಾದರಿ ನೀತಿಸಂಹಿತೆ ಜಾರಿಯಾಗಿದ್ದು ಅಧಿಕಾರಿಗಳು ನೀತಿಸಂಹಿತೆ ಉಲ್ಲಂಘನೆಯನ್ನು ಕುರಿತು ಕಠೀಣ ಕ್ರಮ ಜರುಗಿಸಬೇಕೆಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದ್ದಾರೆ.