ಕಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವಡೆ ಇಂದು ಬೆಳಗ್ಗೆ 9.48 ರ ಸುಮಾರಿಗೆ ಮತ್ತೆ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ.
ಇಂದು ಬೆಳಗ್ಗೆ 9.48 ರ ಸುಮಾರಿಗೆ 5 ಸೆಕೆಂಡ್ ಗಳ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ತೀವ್ರತೆ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕಹಳ್ಳಿ ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿ ಲಘು ಭೂಕಂಪನವಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ.