ಕಲಬುರಗಿ: ಇಂದು ನವೆಂಬರ್ 1 ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮದ ಮನೆಮಾಡಿದ್ದು, ಈ ನಡುವೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಹೋರಾಟಗಾರರು ಪ್ರತ್ಯೇಕ ಕನ್ನಡ ಧ್ವಜಾರೋಹಣ ಮಾಡಿದ ಘಟನೆ ನಡೆಯಿತು. ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಇಂದು ನಿನ್ನೆಯದಲ್ಲ, ಇದೀಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ.
ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿದ ಪ್ರತಿಭಟನಾಕಾರರು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆಸಿದ್ದಾರೆ. ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದೆ.
ಸಮಿತಿ ಅಧ್ಯಕ್ಷ ಎಮ್‌ಎಸ್ ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.