ಬಂಟ್ವಾಳ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಕಲ್ಲಡ್ಕ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು ಕಲ್ಲಡ್ಕದ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(29) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಗ್ಯಾರೇಜ್ ಒಂದರಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ ಲತೀಶ ಭಾನುವಾರ ರಜಾದಿನವಾಗಿದ್ದರಿಂದ ಸಮೀಪದ ದೇವಸ್ಥಾನಕ್ಕೆ ಹೋಗಿ ವಾಪಾಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ
ಕಲ್ಲಡ್ಕದಿಂದ ವಾಪಸು ತನ್ನ ಮನೆಯಾದ ಗೋಳ್ತಮಜಲು ಕಡೆಗೆ ಹೋಗಲು ವಿಟ್ಲ ರಸ್ತೆಯನ್ನು ದಾಟುತ್ತಿದ್ದಾಗ ಅತಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಲತೀಶ್ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ.
ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸತೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.