ಕೋಲಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ,ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರೈತರಿಗೂ ಕೂಡ ಬಡ್ಡಿರಹಿತ ಸಾಲವನ್ನು 5 ಲಕ್ಷಕ್ಕೆ ಏರಿಸುತ್ತೇವೆ. ಶೇ. 3ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಮಹಿಳಾ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಇನ್ನು ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಎಂದಿದ್ದಾರೆ. ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವವರ ಸಾಲವನ್ನು ಮನ್ನಾ ಮಾಡಲಾಗುವುದು .
ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ ಎಂದು ಹೇಳಿದ್ದಾರೆ.ಬಡ್ಡಿರಹಿತ ಸಾಲದ ಪ್ರಮಾಣ ಏರಿಸುವ ಬಗ್ಗೆ ಮತ್ತು ಸಾಲ ಮನ್ನಾ ಬಗ್ಗೆ ಪಕ್ಷದ ಪ್ರಣಾಳಿಕೆ ಕಮಿಟಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು.ಇದೇ ವೇಳೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಹಾಲು, ಮೊಸರು, ಅಕ್ಕಿ ಸೇರಿದಂತೆ ಮಕ್ಕಳು ಓದು ಪೆನ್ನು ಪುಸ್ತಕಗಳ ಮೇಲೂ ತೆರಿಗೆ ವಿಧಿಸಿದೆ ಎಂದ , ಮೋದಿ ಸರ್ಕಾರ ಬಂದ ಮೇಲೆ ಉದ್ಯಮಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.