Share this news

ಕಾರ್ಕಳ:ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸುವತ್ತ ಸಾಗುತ್ತಿದ್ದು ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಪಂಚರಾಜ್ಯಗಳ ಚುನಾವಣೆ ನಡೆದು ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಬಹುತೇಕ ಪ್ರಕಟಗೊಂಡಿದ್ದು, ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ಕ್ಷಣಿಕ ಗ್ಯಾರಂಟಿಗಳನ್ನು ತಿರಸ್ಕರಿಸಿದ ಮತದಾರ ಪ್ರಧಾನಿ ಮೋದಿಯವರ ಶಾಶ್ವತ ಗ್ಯಾರಂಟಿ ಯೋಜನೆಗಳಿಗೆ ಮತಹಾಕಿದ್ದಾರೆ ಎಂದಿದ್ದಾರೆ. ನಾಲ್ಕು ರಾಜ್ಯಗ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಬಹುಮತದ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ

 

Leave a Reply

Your email address will not be published. Required fields are marked *