ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದರು.
ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಲವು ಕೊಡುಗೆಗಳನ್ನ ಘೋಷಣೆ ಮಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯರ್ತೆಯರಿಗೆ 15 ಸಾವಿರ ರೂ. ವೇತನ ಏರಿಕೆ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ರೂ. ವೇತನ,. ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವೇತನ ಏರಿಕೆ ಮಾಡುತ್ತೇವೆ. ಬಿಸಿಯೂಟ ಕಾರ್ಯಕರ್ತೆಯರಿಗೆ 5 ಸಾವಿರ ರೂ. ವೇತನ ಏರಿಕೆ ಮಾಡುತ್ತೇವೆ ಎಂದು ಘೋಷಣೆ ಮಾಡಿದರು. ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪರಿಹಾರ ಧನ ಘೋಷಣೆ ಮಾಡಿದ್ದು, . ಅಂಗನವಾಡಿ ಕಾರ್ಯಕರ್ತೆಯರಿಗೆ 3 ಲಕ್ಷ ರೂ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2ಲಕ್ಷ ರೂ. ವಿಶೇಷ ಪರಿಹಾರ ಧನ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.