ನವದೆಹಲಿ: ರಾಜ್ಯಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಕ್ರೀಯ ರಾಜಕಾರಣದಿಂದ ದೂರವೇ ಉಳಿದಿದ್ದಂತ ಸೋನಿಯಾ ಗಾಂಧಿ, ಇದೀಗ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಣಕ್ಕೆ ಇಳಿಯಲಿದ್ದಾರೆ.
ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಂಬರುವ ರಾಜ್ಯಸಭಾ ಚುನಾವಣೆ 2024ಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರೋದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಪ್ರಕಟಿಸಿರುವ ಪಟ್ಟಿಯಲ್ಲಿ ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೊರೆ ಕಣಕ್ಕೆ ಇಳಿಯೋದಾಗಿ ತಿಳಿಸಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ