ಬೆಂಗಳೂರು (ಏ.06): ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ.
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಆದರೆ, ಇನ್ನೂ 58 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಗೊಂದಲವನ್ನು ಬಗೆಹರಿಸಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.