ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಆಳಂದ ಡಿ.26: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದರಲ್ಲಿ ನಾಲ್ಕು ಭರವಸೆಗಳನ್ನು ಈಡೇರಿಸುವ ಮೂಲಕ ಬಡವರಿಗೆ ಹಣವನ್ನು ಕೊಟ್ಟರೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗದೇ ಟೀಕೆಯಲ್ಲಿ ತೋಡಗಿದ್ದಾರೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಿಜೆಪಿಗರ ವಿರುದ್ಧ ತೀವ್ರ ತರಾಟೆಗೆ ತೆಗೆದುಕೊಂಡರು.
ಅವರು ಆಳಂದ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ 1.14 ಕೋಟಿ ರುಪಾಯಿ ವೆಚ್ಚದ ನೂತನ ಕಟ್ಟಡ ಸಮಾರಂಭ ಉದ್ಘಾಟಿಸಿ ಮಾತನಾಡಿ,ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳನ್ನು ಈಡೇರಿಸಲು ಮುಂದಾಗಿದೆ. ಸಿಎಂ ಸಿದ್ರಾಮಯ್ಯನವರ ನೇತೃತ್ವದ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿದೆ. ದೊಡ್ಡ ಪ್ರಮಾಣದಲ್ಲಿ ನುಡಿದಂತೆ ನಡೆಯುತ್ತಿದೆ. ಪ್ರತಿಮನೆ ಒಡತಿಗೆ ತಿಂಗಳಿಗೆ ₹2 ಸಾವಿರ, ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, 10 ಕೆ.ಜಿ. ಅಕ್ಕಿ ಬದಲು 5 ಕೆಜಿ ಇನ್ನೂ 5 ಕೆಜಿ ಬದಲು ಹಣವನ್ನು ನೀಡಲಾಗುತ್ತಿದೆ.
5ನೇ ಭರವಸೆ ನಿರುದ್ಯೋಗಿ ವಿಧಾವಂತರಿಗೆ ನಿರುದ್ಯೋಗ ಭತ್ಯೆ ನೀಡುವ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಿಎಂ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಯವಾಗಿದೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಸುಳ್ಳು ಭರವಸೆ ಕೊಟ್ಟು ಅಧಿಕಾರ ನಡೆಸಿ ಜನತೆ ಮೊಸ ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಹಣ ಕೊಡುವುದು ಅರಗಿಸಿಕೊಳ್ಳಲಾಗದೆ ಬಿಜೆಪಿಗರು ಟೀಕೆಯಲ್ಲಿ ತೊಟಗಿದ್ದಾರೆ. ಕ್ಷೇತ್ರದಲ್ಲಿ ಬಿ.ಆರ್. ಪಾಟೀಲರವರು ಒಳ್ಳೆಯ ಅಭಿವೃದ್ಧಿಯ ಶಾಸಕರು ಸಿಕ್ಕಿದ್ದಾರೆ ಇಂಥ ಹತ್ತು ಹಲವಾರು ಕಾರ್ಯಕ್ರಮಗಳನ್ನು ಅವರ ಮೂಲಕ ಅನುಷ್ಠಾನ ಮಾಡಿಕೊಂಡು ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಸಾಗಲು ಜನರು ಕೈಜೋಡಿಸಬೇಕು ಎಂದು ಮನವಿ ಮಾಡಿದರು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ