Share this news

ಕಾರ್ಕಳ: ಗ್ರಾಮೀಣ ಹಾಗೂ ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಗಾರರನ್ನು ಸಡೃಢಗೊಳಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಪಿ.ಎಂ ವಿಶ್ವಕರ್ಮ ಯೋಜನೆಯ ಉಚಿತ ನೊಂದಣಿ ಅಭಿಯಾನವು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿ.ಸಿ ಟ್ರಸ್ಟ್ ಕಾಂತಾವರ ಇವರ ಸಹಯೋಗದೊಂದಿಗೆ ಕಾಂತಾವರ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜದ ಸಭಾಂಗಣದಲ್ಲಿ ಜರಗಿತು.
ಕಾಂತಾವರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಯತೀಶ್ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಯೋಜನೆ ಸಿ.ಎಸ್.ಸಿ ಸಿಬ್ಬಂದಿ ಶಿಲ್ಪಾ ಪಿ.ಎಂ ವಿಶ್ವಕರ್ಮ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಇತರ ಸೇವೆಗಳಾದ ಇಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಆಭಾ ಕಾರ್ಡ್ ಗಳ ನೊಂದಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂತಾವರ ಗ್ರಾಮ ಪಂಚಾಯತಿ ಸದಸ್ಯ ಸುಧಾಕರ ಸಾಲ್ಯಾನ್ , ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸೇವಾನಿರತೆ ಶಶಿಕಲಾ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಹರೀಶ್ ಅಚಾರ್ಯ ಬೇಲಾಡಿ ನಿರೂಪಿಸಿ ವಂದಿಸಿದರು.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *