ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ನಡೆದಿದೆ.
ಕಾಡುಹೊಳೆ ನಿವಾಸಿ ಅರವಿಂದ ಸೇರ್ವೇಗಾರ್ ಎಂಬವರ ಪುತ್ರ ರಾಘವೇಂದ್ರ (25) ಎಂಬ ಯುವಕ ಫೆ 12ರ ಭಾನುವಾರ ರಾತ್ರಿ ತಾನು ಮಲಗಿದ್ದ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿಯಲ್ಲಿ ಖಾಸಗಿ ಕಂಪೆನಿಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದರು. ರಾಘವೇಂದ್ರ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ, ಅವರ ತಾಯಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಶಂಕಿಸಲಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ. ತೀರಾ ಸಾಧು ಸ್ವಭಾವದ ಯುವಕನಾಗಿದ್ದ ರಾಘವೇಂದ್ರ ಸ್ಥಳೀಯರಲ್ಲಿಯೂ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲ್ಲಿಲ್ಲ.
ಅಜೆಕಾರು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ