Share this news

ಮುಲ್ಕಿ:ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುದಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಯವರು ಕಾಪು ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರ್ನಾಟಕ ಪತ್ರಿಕೆ ಮುಲ್ಕಿ ವರದಿಗಾರ ಹರೀಶ್ ಹೆಜ್ಮಾಡಿರವರನ್ನು ಗೌರವಿಸಿದರು.


ಈ ಸಂದರ್ಭ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಪತ್ರಕರ್ತರು ವಸ್ತು ನಿಷ್ಠರಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದರು.

ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಅಧ್ಯಕ್ಷ ವೆಂಕಟೇಶ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *