ಕಾಪು: ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಗುರುವಾರ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಕಡಲ್ಕೊರೆತ ಇನ್ನೂ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ, ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.