Share this news

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1, ಎಸ್‌ಸಿ ಹಾಗೂ ಎಸ್.ಟಿ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಅಕ್ಟೋಬರ್.11 ರಳಗಾಗಿ https://shp.karnataka.gov.in ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka,gov.in ನಲ್ಲಿ ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು ಅಥವಾ ದೂರವಾಣಿ ಸಂಖ್ಯೆ: 08382-226588 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *