Share this news

ಕಾರ್ಕಳ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರಿಗೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು , ಎ.20 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಯಾಗಿ ಶ್ರಿಕಾಂತ್ ಪೂಜಾರಿ ಕುಚ್ಚೂರು ನಾಮಪತ್ರ ಸಲ್ಲಿಕೆ:
ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಕಾಂತ್ ಪೂಜಾರಿ ಕುಚ್ಚೂರು ಕಾರ್ಕಳದ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಯೋಗೇಶ್ ಶೆಟ್ಟಿ , ಕಾರ್ಯಾಧ್ಯಕ್ಷ ವಾಸುದೇವ ರಾವ್ , ಕಾಪು ಬ್ಲಾಕ್ ಆದ್ಯಕ್ಷ ಭರತ್ ಶೆಟ್ಟಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಅಚಾರ್ಯ,ಸುರೇಶ್ ದೇವಾಡಿಗ ಕಾರ್ಕಳ,ಸೈಯದ್ ಹರ್ಷದ್ , ಹರೀಶ್ ಮುದ್ರಾಡಿ, ನಜೀರ್, ಅಸ್ಪಕ್, ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ನಾಮಪತ್ರ ಸಲ್ಲಿಕೆ:
ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು , ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ , ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕಾಂಗ್ರೆಸ್ ಮುಖಂಡ ಅವೆಲಿನ್ ಲೂಯಿಸ್, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಆರೀಫ್ ಕಲ್ಲೊಟ್ಟೆ, ಕೃಷ್ಣಯ್ಯ ಶೆಟ್ಟಿ, ಇಂದಿರಾ ಶೆಟ್ಟಿ, ನಮಿತ ಶೆಟ್ಟಿ , ಯೂತ್ ಕಾಂಗ್ರೆಸ್ ನ ಯೊಗೇಶ್ ಇನ್ನಾ ಮೊದಲಾದವರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ:
ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಅವರು ಇಂದು (ಏಪ್ರಿಲ್ 18) ಚುನಾವಣಾ ಅಧಿಕಾರಿ ಮದನ್ ಮೋಹನ್ ರವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗದ ಅಧ್ಯಕ್ಷರಾದ ಹರೀಶ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.


ಸತ್ಯವಾನ್ ಸಂಸ್ಥೆಯ ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ:
ಸತ್ಯವಾನ್ ಸಂಸ್ಥೆಯ ಮಮತಾ ಹೆಗ್ಡೆ ಪಕ್ಷೇತರರರಾಗಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಬಿಜೆಪಿ ಮುಖಂಡ , ಕರಾವೆ ಕಾರ್ಕಳ ಅಧ್ಯಕ್ಷ ಪ್ರಕಾಶ್ ಶೆಟ್ಟಿ ,ಮೋದಿ ಬ್ರಿಗೆಡ್ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ,ಮೋದಿ ಬ್ರಿಗೇಡ್ ಉಡುಪಿ ಯುವ ಘಟಕ ಜಿಲ್ಲಾದ್ಯಕ್ಷ ಶರತ್ ಶೆಟ್ಟಿ , ವೇದಾವತಿ ಹೆಗ್ಡೆ ಉಪಸ್ಥಿತರಿದ್ದರು.


ನ್ಯಾಯವಾದಿ ಹರೀಶ್ ಅಧಿಕಾರಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ:
ನ್ಯಾಯವಾದಿ ಕೆ ಹರೀಶ್ ಅಧಿಕಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಇನ್ನೋರ್ವ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಧಾಕರ್ ಆಚಾರ್ಯ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *