ಕಾರ್ಕಳ: ಕಾರ್ಕಳದ ಅತ್ತೂರಿನ ಐತಿಹಾಸಿಕ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜನವರಿ 21 ರಂದು ಭಾನುವಾರ ವಿಜೃಂಭಣೆಯಿಂದ ಆರಂಭಗೊಂಡಿತು. ಮಹೋತ್ಸವವು ಜ. 21 ರಿಂದ 26 ರವೆರೆಗೆ ನಡೆಯಲಿದೆ.
ಜ. 21 ರಂದು ಭಾನುವಾರ ಬೆಳಗ್ಗೆ ಪುಣ್ಯಕ್ಷೇತ್ರದ ಸಂತ ಲಾರೆನ್ಸರ ಪವಿತ್ರ ಅವಶೇಷವನ್ನು ಹಾಗೂ ಪವಾಡ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಟಾಪಿಸಿದರು. ನಂತರ ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡುವ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.
ದಿನದ ಪ್ರಮುಖ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷರು ಪರಮಪೂಜ್ಯ ಡೊ. ಅಲೋಶಿಯಸ್ ಪಾವ್ ಡಿ’ ಸೋಜ ನೆರವೇರಿಸಿ ಪ್ರಬೋಧನೆ ನೀಡಿದರು. ದೇವರ ವಾಕ್ಯದ ಭಾನುವಾರದ ಪ್ರಯುಕ್ತ ವಿಶೇಷ ಪ್ರಭೋದನೆ ನೀಡಿದ ಅವರು, “ದೇವರ ವಾಕ್ಯವನ್ನು ಆಲಿಸಿ, ಅದನ್ನು ಧ್ಯಾನಿಸಿ, ಜೀವನದಲ್ಲಿ ಪಾಲಿಸಿದಾಗ ಸದ್ಗುಣಗಳ ಫಲವನ್ನು ನೀಡಲು ಸಾಧ್ಯ. ಈ ಮುಖಾಂತರ ನಾವೆಲ್ಲರೂ ದೇವರ ಪ್ರೀತಿಯ ಮಕ್ಕಳಾಗುತ್ತೇವೆ” ಎಂದರು.
ದಿನದ ಇತರ ಬಲಿಪೂಜೆಗಳನ್ನು ವಂ. ವಿನ್ಸೆಂಟ್ ಸೀಕ್ವೆರಾ, ಬಟ್ಟೋಡಿ, ವಂ. ನವೀನ್ ಪಿಂಟೊ, ಮಂಗಳೂರು,ವಂ. ಮೊನ್ಸಿಜೊರ್ ಪೊರ್ಡಿನಾಡ್ ಗೊನ್ಸಾಲ್ವಿಸ್, ಶ್ರೇಷ್ಠ ಧರ್ಮಗುರುಗಳು ಉಡುಪಿ ಧರ್ಮಕ್ಷೇತ್ರ, ವಂ. ರಾಜೇಶ್ ರೊಜಾರಿಯೊ, ಮಂಗಳೂರು ವಂ ಡೊ. ರೊಕ್ ಡಿ’ ಸೋಜ, ಸಂತೆಕಟ್ಟೆ, ವಂ. ಬೊನಿಫಾಸ್ ಪಿಂಟೊ, ಮೂಡುಬೆಳ್ಳೆ, ವಂ. ಚೇತನ್ ಲೋಬೊ, ಬಿಜೈ ನೆರವೇರಿಸಿದರು.
ದಿನದ ಅಂತಿಮ ಬಲಿಪೂಜೆಯನ್ನು ರಾತ್ರಿ 8 ಗಂಟೆಗೆ ನೆರವೇರಿಸಿ ಮಹೋತ್ಸವದ ಪ್ರಥಮ ದಿನದ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪನ್ನಗೊಳಿಸಲಾಯಿತು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ