Share this news

ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿಧನದ ಅಂಗವಾಗಿ ಕಾರ್ಕಳ ತಾಲೂಕು ಕಚೇರಿಯ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶಿಲ್ದಾರ್ ನರಸಪ್ಪ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಹಾನ್ ಮಾನವತಾವಾದಿ ಹಾಗೂ ಸಂವಿಧಾನದ ನಿರ್ಮಾತೃ ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸೋಮನಾಥ ನಾಯ್ಕ್, ಕಾರ್ಕಳ ದಲಿತ ಸಂಘರ್ಷ ಸಮಿತಿಯ ಪ್ರಧಾನ ಸಂಚಾಲಕ ರಾಘವ ಕುಕ್ಕುಜೆ, ಸಹಸಂಚಾಲಕ ರಮೇಶ್ , ಅಕ್ರಮ ಸಕ್ರಮ ಸಮಿತಿ ಸದಸ್ಯ ರಮೇಶ್ ನಿಟ್ಟೆ ಮುಂತಾದವರು ಹಾಜರಿದ್ದರು

Leave a Reply

Your email address will not be published. Required fields are marked *