ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಕೀಟಬಾಧೆಯಿಂದ ಇಂದು ರೈತರಿಗೆ ತೀವೃ ತೊಂದರೆ ಎದುರಿಸುತ್ತಿದ್ದಾರೆ. ಪ್ರಮುಖವಾಗಿ ಅಡಿಕೆ ಬೆಳೆಗೆ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರ ಬದುಕು ದುಸ್ತರವಾಗಿದೆ ಎಂದರು. ಸಧ್ಯಕ್ಕೆ ಎಲೆಚುಕ್ಕಿ ರೋಗವು ಅಡಿಕೆ ಬೆಳೆಗಾರರಿಗೆ ಮಾರಕವಾಗಿ ಪರಿಣಮಿಸುತ್ತಿದ್ದು, ಈ ಲಕ್ಷಣಗಳು ಕಂಡುಬAದಲ್ಲಿ ಆರಂಭದಲ್ಲೇ ಪತ್ತೆಹಚ್ಚಿ ತೋಟಗಾರಿಕಾ ಇಲಾಖೆ ಶಿಫಾರಸ್ಸು ಮಾಡಿರುವ ಔಷಧಿಯನ್ನು ಸಿಂಪಡಣೆ ಮಾಡುವ ಮೂಲಕ ಈ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದರು.
ಪುರಸಭಾ ಸದಸ್ಯೆ ಮೀನಾಕ್ಷಿ ಗಂಗಾಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತೋಟಗಾರಿಕಾ ರೈತ ಉತ್ಪಾದಕ ಸಂಘದ ಉಪಾಧ್ಯಕ್ಷ ಹರಿಶ್ಚಂದ್ರ ತೆಂಡುಲ್ಕರ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ಚೈತನ್ಯ, ಶೃಂಗೇರಿ ತೋಟಗಾರಿಕಾ ಸಂಶೋಧನಾ ಕೇಂದ್ರದ ಡಾ. ಸಂಜೀವ ಚಕಾತಿಮಠ, ಕಾರ್ಕಳ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ ಉಪಸ್ಥಿತರಿದ್ದರು.
ಶ್ರೀನಿವಾಸ ಬಿ,ವಿ ಸ್ವಾಗತಿಸಿ, ತೋಟಗಾರಿಕಾ ರೈತ ಉತ್ಪಾದಕ ಸಂಘದ ಸಿಇಒ ಪ್ರಮಿತ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ