ಕಾರ್ಕಳ: ಪುರಸಭೆ ಮತ್ತು ಗ್ರಾ.ಪಂ.ವ್ಯಾಪ್ತಿಯಲ್ಲಿ ಅಳವಡಿಸಲಾದ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳಿದ್ದಲ್ಲಿ ತಕ್ಷಣ ತೆರವುಗೊಳಿಸುವಂತೆ ಕಾರ್ಕಳ ಪೊಲೀಸ್ ಇಲಾಖೆ ಸೂಚಿಸಿದೆ.
ಈಗಾಗಲೇ ಸ್ಥಳೀಯಾಡಳಿತದ ಅನುಮತಿ ಪಡೆಯದೆ ಅಲ್ಲಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಿರುವುದು ಗಮನಕ್ಕೆ ಬಂದಿದೆ. ಅದನ್ನು ತಕ್ಷಣ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.