ಕಾರ್ಕಳ: ಪ್ರೌಢಶಾಲಾ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಆಕೆಯ ಮೇಲೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಇಬ್ಬರು ಕಿರಾತಕರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಕರಿಯಕಲ್ಲು ನಿವಾಸಿ ಚಂದ್ರು (34) ಹಾಗೂ ಕಾಳಿಕಾಂಬ ನಿವಾಸಿ ಸೂರಜ್ (25) ಎಂಬವರು ಬಂಧಿತ ಆರೋಪಿಗಳು.
ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ