ಕಾರ್ಕಳ :ಕಾರ್ಕಳದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಿರ್ಗಾನ ಗೊರಟ್ಟಿ ಚರ್ಚ್ ಬಳಿಯ ನಿವಾಸಿ ಅಶೋಕ್ ಶೆಟ್ಟಿ ಎಂಬವರ ಪುತ್ರ
ಅಮೃತ್ ಶೆಟ್ಟಿ (22) ಎಂಬುವರು ಶುಕ್ರವಾರ ಮಧ್ಯಾಹ್ನ ತನ್ನ ಮನೆಯ ಮಹಡಿಯ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ತಂದೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.