ಕಾರ್ಕಳ: ಕುಸ್ತಿ ಅತ್ಯುತ್ತಮ ಕ್ರೀಡೆ. ಇದರಲ್ಲಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ, ಬುದ್ಧಿ ಕ್ಷಮತೆ ವೃದ್ಧಿಯಾಗುತ್ತದೆ. ಆದರೆ ತಾಲೂಕಿನ ಕೇವಲ ಎರಡು ಶಾಲಾ ಕಾಲೇಜುಗಳಲ್ಲಿ ಮಾತ್ರ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕುಸ್ತಿ ಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗೆ ಬರುವಂತಾಗಲಿ. ಮುಖ್ಯವಾಗಿ ಕುಸ್ತಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳ ಅಗತ್ಯ ಇದೆ ಎಂದು ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಹೇಳಿದರು.
ಅವರು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ರಾಮದಾಸ್ ಪ್ರಭು, ಮುಖ್ಯೋಪಾಧ್ಯಾಯ ಯೋಗೇಂದ್ರ ನಾಯಕ್ , ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಕಾರ್ಕಳ ತಾಲೂಕಿನ ವಿವಿಧ ಶಾಲೆಗಳ ಕುಸ್ತಿ ಪಟುಗಳು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕಿ ಪ್ರಿಯಾ ಪ್ರಭು ಸ್ವಾಗತಿಸಿ ನಿರೂಪಿಸಿದರು. ಕುಸ್ತಿ ಪಟು ಮಾ. ಸಿದ್ದಲಿಂಗ ವಂದಿಸಿದರು.


