ಕಾರ್ಕಳ :ಇತ್ತೀಚೆಗೆ ಮೊಬೈಲ್ ನಿಂದಾಗಿ ಅನೇಕ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಕೇಸುಗಳು ವಿದ್ಯಾರ್ಥಿಗಳಲ್ಲೇ ಕಂಡುಬರುವುದು ವಿಷಾದನೀಯ. ಫೇಸ್ ಬುಕ್, ಇನ್ಸ್ಟಾಗ್ರಾಮ್, ವಾಟ್ಸಪ್ ಗಳಲ್ಲಿ ಫೋಟೋ, ವೀಡಿಯೋಗಳನ್ನು ಕಳಿಸಿ ಜೀವನದಲ್ಲಿ ಸಮಸ್ಯೆಗಳಿಗೆ ಸಿಲುಕಿರುವ ಅನೇಕ ಕೇಸುಗಳು ದಾಖಲಾಗಿವೆ. ಈ ಬಗ್ಗೆ ವಿದ್ಯಾರ್ಥಿಗಳು ಜಾಗ್ರತೆಯನ್ನು ವಹಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ಶಿಕ್ಷಣಕ್ಕೆ ಮಾತ್ರ ಗಮನ ನೀಡಬೇಕು. ಸಾಧ್ಯವಾದಷ್ಟು ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಿ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ ಕೆ ಹೇಳಿದರು.
ಅವರು ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಹಾಗೂ ಜೇಸಿಐ ಕಾರ್ಕಳ ರೂರಲ್ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಜೇಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಮಂಜುನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ರಾಮದಾಸ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಕು. ಲಕ್ಷ್ಮಿ ಬಾಯಿ , ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಜೇಸಿಐ ಕಾರ್ಕಳ ರೂರಲ್ ನ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ವೀಣಾ ರಾಜೇಶ್ ಉಪಸ್ಥಿತರಿದ್ದರು.
ಪ್ರಭಾತ್ ರಂಜನ್ ಸ್ವಾಗತಿಸಿ, ದೇವದಾಸ್ ಕೆರೆಮನೆ ವಂದಿಸಿದರು.
ಉಪನ್ಯಾಸಕ ಪದ್ಮಪ್ರಭ ಇಂದ್ರ ನಿರೂಪಿಸಿದರು.