ಕಾರ್ಕಳ : ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ಅವರನ್ನು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005 ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಾತಿ ಹೊಂದಿದರು. 2006 ಬ್ಯಾಚ್ ನ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ ಕೆ.ಎ.ಎಸ್ ಸೇವೆಗೆ ಸೇರ್ಪಡೆಗೊಂಡರು.
ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಯಾಗಿ ಬಳಿಕ ಐ ಎ ಎಸ್ ಪದೋನ್ನತಿ ಪಡೆದು ಬೆಂಗಳೂರಿನ ಮೆಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.