Share this news

ಕಾರ್ಕಳ:ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಾತನಾಡಿ,ರಾಜಕೀಯ ಲಾಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದಾರೆ,ಆದರೆ ಈ ಮಸೂದೆಯಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದೆ ಎಂದರು‌.
ಮಹಿಳೆಯರನ್ನು ನಿಕೃಷ್ಟವಾಗಿ ಬಿಂಬಿಸಿದ ಮನುವಾದಿಗಳು ಹಾಗೂ ಗೋಲ್ವಾಲ್ಕರ್ ಅವರನ್ನು ಬಿಜೆಪಿಯವರು ಆರಾಧಿಸುತ್ತಾರೆ.ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಲ್ಲಿ ಸಂವಿಧಾನದ ಆಶಯಗಳು ನಾಶವಾಗುತ್ತದೆ.ಆದ್ದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಕರೆ ನೀಡಿದರು.
ಅವರು ಶನಿವಾರ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ  ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ  ಮಾತನಾಡಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನುಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಾತ್ಯಾತೀತರು, ಹಿಂದುಳಿದ ವರ್ಗದ ವರ್ಗ,ದಲಿತರು,ಅಲ್ಪಸಂಖ್ಯಾತರು ಹಾಗೂ ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದರು.ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಲ್ಲಿ ದುಡಿಯಬೇಕೆಂದು ಕರೆ ನೀಡಿದರು.

ಮುನಿಯಾಲು ಉದಯ ಶೆಟ್ಟಿ ಮಾತನಾಡಿ, ಪಕ್ಷ ಸಂಘಟನೆಗೆ ಎಲ್ಲರೂ ಒತ್ತು‌ ನೀಡಬೇಕು, ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ‌ ಕಾಂಗ್ರೆಸ್ ಗೆಲ್ಲುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಬಿಜೆಪಿಯವರು ಧಾರ್ಮಿಕ ಭಾವನೆಗಳ ಆಧಾರದಲ್ಲಿ ಅಧಿಕಾರಕ್ಕೆ ಬಂದರೆ,ಕಾಂಗ್ರೆಸ್ ಬಡವರ ಬದುಕು ಕಟ್ಟುವ ನಿಟ್ಟಿನಲ್ಲಿ ರಾಜಕಾರಣ ಮಾಡಿದೆ,ಮುಂದಿನ‌ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಈಗಿನಿಂದಲೇ ಕಾರ್ಯಪ್ರವೃತ್ತರಾಬೇಕಿದೆ ಎಂದರು‌.

ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ,ಕಾಂಗ್ರೆಸ್ ಎಂದಿಗೂ ಸೋಲಿಗೆ ಭಯಪಡುವುದಿಲ್ಲ, ಬಿಜೆಪಿಯವರು ಸುಳ್ಳನ್ನೇ ಪ್ರಚಾರ ಮಾಡಿ ಗೆದ್ದಿರಬಹುದು ಆದರೆ ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಗೆಲ್ಲುವುದು ನಿಶ್ಚಿತ ಎಂದರು.ಕಾರ್ಕಳ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಪಡೆಯಬೇಕಾದರೆ ವಿರೋಧ ಮಾಡಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಆಗ ಯಶಸ್ಸು ಸಾಧ್ಯವೆಂದರು‌.ಉಡುಪಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಗುರಿಯಾಗಿದೆ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ,5 ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸುವುದರ ಜತೆಗೆ ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆ, ಶಕ್ತಿ ಯೋಜನೆಯ ಮೂಲಕ 34 ಸಾವಿರ ಕೋಟಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ,ಕೆಪಿಸಿಸಿ ಕಾನೂನು ವಿಭಾಗದ ಸುಧೀರ್ ಮರೋಳಿ,ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಸುರೇಂದ್ರ ಶೆಟ್ಟಿ,ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಂಜುನಾಥ ಪೂಜಾರಿ,ಜಿಲ್ಲಾ ವಕ್ತಾರರ ಬಿಪಿನಚಂದ್ರ ಪಾಲ್, ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್‌ ,ರಾಘವ ದೇವಾಡಿಗ,ಜಿಲ್ಲಾ ಕಾಂಗ್ರೆಸ್ ಸದಸ್ಯ ಸಿರಿಯಣ್ಣ ಶೆಟ್ಟಿ ,ಸುಭೋದ್ ಶೆಟ್ಟಿ,ಇಂಟಕ್ ಅದ್ಯಕ್ಷ ಕಿರಣ್ ಹೆಗ್ಡೆ, ಡಾ. ಪ್ರೇಮ್ ದಾಸ್‌, ಜಿಲ್ಲಾ ಅಲ್ಪಸಂಖ್ಯಾತ ಸಮಿತಿ ಸದಸ್ಯ ಮೊಯಿದ್ದಿನಬ್ಬ ಇನ್ನಾ, ಆರೀಫ್ ಕಲ್ಲೊಟ್ಟೆ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ,ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ಎನ್. ರೈ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾರ್ಕಳ ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಬಾಯರಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಶೇಖರ ಮಡಿವಾಳ ಸ್ವಾಗತಿಸಿ, ವಂದಿಸಿದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಕಾರ್ಯಕ್ರಮ ನಿರೂಪಿಸಿದರು.

 

 

Leave a Reply

Your email address will not be published. Required fields are marked *