ಕಾರ್ಕಳ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಕಳ ಪೇಟೆಯ ದುರ್ಗಭವನ ಹೊಟೇಲ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮರ್ಣೆ ಗ್ರಾಮದ ರಾಘು ಎಂಬವರು ಶನಿವಾರ ಸಂಜೆ 5.30ರ ಸುಮಾರಿಗೆ ಹೊಟೇಲ್ ದುರ್ಗಾ ಭವನ ಕಡೆಗೆ ಬರಲು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ರಾಘು ಎಂಬವರು ರಸ್ತೆಗೆ ಬಿದ್ದ ಪರಿಣಾಮ ಅವರ ತಲೆ ಹಾಗೂ ಸೊಂಟಕ್ಕೆ ತೀವೃ ಗಾಯಗಳಾಗಿದ್ದು ಅವರನ್ನು ಕಾರ್ಕಳ ಖಾಸಗಿ ಆಸ್ಪತೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತೆಗೆ ದಾಖಲಿಸಲಾಗಿದೆ. ಕಾರು ಚಾಲಕ ವಿಶ್ವನಾಥ ಎಂಬವರ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೈಲೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಗಂಭೀರ
ಅತೀವೇಗವಾಗಿ ಬರುತ್ತಿದ್ದ ಬೈಕ್ ಸವಾರ ನಿಯಂತ್ರಣತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.
ಕಾರ್ಕಳದ ಬೈಲೂರು ಸಮೀಪದ ಬಸ್ರಿ ಶಾಲೆಯ ಬಳಿ ಈ ದುರ್ಘಟನೆ ಸಂಭವಿಸಿದ್ದು, ವಿಶ್ವನಾಥ ಎಂಬವರು ಭಾನುವಾರ ಸಂಜೆ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ತನ್ನ ಬೈಕಿನಲ್ಲಿ ಅತೀವೇಗವಾಗಿ ಸವಾರಿ ಮಾಡಿಕೊಂಡು ಬಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಅವರ ತಲೆ ಹಾಗೂ ಹೊಟ್ಟೆಗೆ ಗಂಭೀರವಾದ ಗಾಯಗಳಾಗಿವೆ.
ಗಾಯಾಳು ಬೈಕ್ ಸವಾರ ವಿಶ್ವನಾಥ ಅವರನ್ನು ಮಣಿಪಾಲ ಕೆಎಂಸಿ ಆಸ್ಪತೆಗೆ ದಾಖಲಿಸಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ