Share this news

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವತಿಯಿಂದ ಆ.30 ರಂದು ಉಡುಪಿಯ ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಲಿಖಿತ್. ಎನ್. – 82 ಕೆ.ಜಿ ಬಾಲಕರ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಇನ್ನೋರ್ವ ವಿದ್ಯಾರ್ಥಿ ಅಭಯ ರಾಮಚಂದ್ರ ಭಟ್ – 82 ಕೆ.ಜಿ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.

ಲಿಖಿತ್. ಎನ್. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಕ್ರೀಡಾ ಸಂಯೋಜಕ ಮಹೇಶ್ ಶೆಣೈ ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *