Share this news

ಹೆಬ್ರಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಯಾರೂ ಚುನಾವಣೆಗೆ ಆಕಾಂಕ್ಷಿಗಳಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಬಹುದು ಆದರೆ ಪಕ್ಷ ತನ್ನ ಅಭ್ಯರ್ಥಿ ಪಟ್ಟಿಯನ್ನು ಅಂತಿಗೊಳಿಸದೇ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡಿದರೆ ಅಂತಹವರ ವಿರುದ್ಧ ಕಾಂಗ್ರೆಸ್ ಪಕ್ಷವು ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದರು.

ಅವರು ಬುಧವಾರ ಹೆಬ್ರಿ ನಾರಾಯಣಗುರು ಸಭಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ಬಾರಿಯ ಚುನಾವಣೆಯ ಸೋಲಿನಿಂದ ಕಾಂಗ್ರೆಸ್ ಪಾಠ ಕಲಿತಿದ್ದು ಈ ಬಾರಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಬಲಿಷ್ಠವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ, ಕಾರ್ಕಳ ಉಡುಪಿ ಹೊರತುಪಡಿಸಿ ಉಳಿದ ಕಡೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ .

ಆದರೆ ಕಾರ್ಕಳದಲ್ಲಿ ಯಾವುದೇ ಅಭ್ಯರ್ಥಿ ಅಂತಿಮವಾಗಿಲ್ಲ. ಆದರೂ ಕೆಲವರು ನನಗೆ ಟಿಕೆಟ್ ಘೋಷಣೆಯಾಗುತ್ತದೆ ನಾನೇ ಅಭ್ಯರ್ಥಿ ಎಂದು ಕಾರ್ಯಕರ್ತರಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದು ಇದು ಕೆಪಿಸಿಸಿ ನಿಯಮಾವಳಿಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎನ್ನುವ ಮೂಲಕ ಮುಂಜುನಾಥ ಪೂಜಾರಿ ತಾನೂ ಕೂಡ ಪ್ರಬಲ ಟಿಕೆಟ್ ಆಕಾಂಕ್ಷಿ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಈ ನಡುವೆ ನಾವೆಲ್ಲರೂ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ, ನಮ್ಮಲ್ಲಿ ಯಾರೇ ಅಭ್ಯರ್ಥಿ ಆದರೂ ಅವರ ಪರವಾಗಿ ನಾವು ಒಗ್ಗಟ್ಟಿನಿಂದ ಸಂಘಟಿತರಾಗಿ ದುಡಿಯುತ್ತೇವೆ, ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎನ್ನುವ ಮೂಲಕ ಕಾರ್ಕಳದ ಟಿಕೆಟ್ ಕುರಿತ ವಿವಾದವನ್ನು ಜೀವಂತವಾಗಿರಿಸಿದ ಮಂಜುನಾಥ ಪೂಜಾರಿಯವರು ಅಡ್ಡಗೋಡೆಯ ಮೇಲೆ ದೀಪವಿಡುವ ಪ್ರಯತ್ನ ಮಾಡಿದರು.

ಬಿಜೆಪಿಯ ಅಭಿವೃದ್ಧಿ ಹಾಗೂ ಹಿಂದುತ್ವ ಅಜೆಂಡಾವನ್ನು ಮುಂದಿಟ್ಟುಕೊAಡು ಈ ಬಾರಿ ಕಾರ್ಕಳದಲ್ಲಿ ಗೆಲ್ಲುವ ವಿಶ್ವಾಸ ಇಟ್ಟುಕೊಂಡಿದೆ ಆದರೆ ಕಾಂಗ್ರೆಸ್ ಪಕ್ಷ ಇನ್ನೂ ಇನ್ನೂ ಅಭ್ಯಥೀಯನ್ನು ಘೋಷಣೆ ಮಾಡದಿರುವುದು ಯುದ್ದಕಾಲದಲ್ಲಿ ಶಸ್ತಾçಭ್ಯಾಸ ಎನ್ನಿಸುವುದಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಪೂಜಾರಿ, ಭಿನ್ನಮತ,ಗೊಂದಲ ಎಲ್ಲಾ ಪಕ್ಷದಲ್ಲಿಯೂ ಇದೆ, ಬಿಜೆಪಿಯಲ್ಲಿ ಮುತಾಲಿಕ್ ಬಣ ಇಲ್ಲವೇ ಎಂದು ಪ್ರಶ್ನಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎನ್ನುವ ಮೂಲಕ ಅಸಮಾಧಾನವಿದ್ದರೂ ಅದಕ್ಕೆ ತೇಪೆ ಹಚ್ಚುವ ಪ್ರಯತ್ನ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಸದಸ್ಯ ನೀರೆ ಕೃಷ್ಣಯ್ಯ ಶೆಟ್ಟಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಂಜಿನಿ ಹೆಬ್ಬಾರ್,ದಿನೇಶ್ ಶೆಟ್ಟಿ ಚಾರ, ಶಂಕರ ಶೆಟ್ಟಿ, ವಿಶುಕುಮಾರ್, ಜನಾರ್ಧನ್ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *