ಕಾರ್ಕಳ : ಬಿಸಿ ನೀರಿಗೆ ಅಳವಡಿಸಿದ ಗ್ಯಾಸ್ ಗೀಸರ್‌ನಲ್ಲಿ ಆಕಸ್ಮಿಕ ಬೆಂಕಿ ಬೆಂಕಿ ಹೊತ್ತಿಕೊಂಡು ಸ್ನಾನ ಮಾಡುತ್ತಿದ್ದ ವ್ಯಕ್ತಿಗೆ ತಗುಲಿ ಗಂಭಿರವಾಗಿ ಗಾಯಗೊಂಡಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಇಂದು (ಎ.12) ಮೃತಪಟ್ಟಿದ್ದಾರೆ.
ಕಾರ್ಕಳ ವೆಂಕಟರಮಣ ದೇವಸ್ಥಾನದ ಬಳಿಯ ನಿವಾಸಿ ಪ್ರಕಾಶ್ ಮಲ್ಯ(74) ಮೃತಪಟ್ಟವರು. ಅವರು ಎ.8 ರಂದು ಬೆಳಗಿವ ಜಾವ ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಸರ್‌ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.