ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಲಕ್ಷಿö್ಮÃಕಾಂತ ಕಾಂಪ್ಲೆಕ್ಸ್ನಲ್ಲಿರುವ ಶ್ರೀದುರ್ಗಾ ಎಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಹಾಗೂ ರ‍್ಯಾಪಿಡ್ ಇನ್ಸಿ÷್ಟಟ್ಯೂಟ್ ಆಫ್ ಅಬಾಕಸ್ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆಯು ಭಾನುವಾರ ನಡೆಯಿತು.
ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ,ಕೆ ರಂಗೋಲಿ ಬಿಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಗವಹಿಸಿ ಸ್ಪರ್ಧಿಗಳಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಬಾಲಕೃಷ್ಣ, ರೇಖಾ ಕಾಮತ್, ರ‍್ಯಾಪಿಡ್ ಇನ್ಸಿ÷್ಟಟ್ಯೂಟ್ ಆಫ್ ಅಬಾಕಸ್ ಸಂಸ್ಥೆಯ ಪ್ರಾಂಶುಪಾಲರಾದ ಸುನೀತಾ ಹೆಬ್ಬಾರ್,ಸಂಸ್ಥೆಯ ಮಾಲೀಕರಾದ ಜಯಂತ್ ಉಪಸ್ಥಿತರಿದ್ದರು
ರಂಗೋಲಿ ಬಿಡಿಸಿ ನಗದು ಬಹುಮಾನ ಗೆಲ್ಲಿ ಎಂಬ ರಂಗೋಲಿ ಬಿಡಿಸುವ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು.
ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳ ಪೈಕಿ ಶ್ವೇತಾ ಪ್ರಥಮ ಬಹುಮಾನವಾಗಿ 3 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ಪಡೆದರೆ, ವಿನುತಾ ದ್ವಿತೀಯ ಬಹುಮಾನವಾಗಿ 2 ಸಾವಿರ ನಗದು ಮತ್ತು ಟ್ರೋಫಿ ಹಾಗೂ ಹರ್ಷಿತಾ ತೃತೀಂiÀi ಬಹುಮಾನವಾಗಿ 1 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ಪಡೆದುಕೊಂಡರು.
ಭಾಗವಹಿಸಿದ ಎಲ್ಲಾ ಸ್ಪಧಿಗಳಿಗೆ ಸಮಾಧಾನಕರ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.