ಕಾರ್ಕಳ: ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜನವರಿ 22ರಿಂದ 25ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ ಎಂದು ಚರ್ಚಿನ ಧರ್ಮಗುರುಗಳಾದ ಅಲ್ಬನ್ ಡಿಸೋಜ ಹೇಳಿದರು.

ಅವರು ಮಂಗಳವಾರ ಚರ್ಚಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅತ್ತೂರಿನ ಸಾಂತ್ ಮಾರಿ ಎಂದೇ ಹೆಸರುವಾಸಿಯಾಗಿರುವ ಕಾರ್ಕಳದ ಅತ್ತೂರು ವಾರ್ಷಿಕ ಜಾತ್ರಾ ಮಹೋತ್ಸವವು 5 ದಿನಗಳ ಕಾಲ ನಡೆಯಲಿದೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಜನವರಿ22 ರಿಂದ 26ರವರೆಗೆ ನಿತ್ಯ 7 ಬಲಿಪೂಜೆ ನಡೆಯಲಿದ್ದು,ಭಕ್ತಾದಿಗಳು ಸಂತರಿಗೆ ಮೇಣದ ಬತ್ತಿ ಅರ್ಪಿಸಲು ಪುಣ್ಯಕ್ಷೇತ್ರದ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ ಉಪಸ್ಥಿತರಿದ್ದರು.

