Share this news

ಕಾರ್ಕಳ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಜಾತ ರವೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಸಂತೋಷ್ ಸಫಲಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನವು ಹಿಂದುಳಿದ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ಒಟ್ಟು 14 ಸದಸ್ಯ ಬಲದ ಪಂಚಾಯಿತಿಯಲ್ಲಿ 11 ಸದಸ್ಯರು ಬಿಜೆಪಿ ಬೆಂಬಲಿತರು ಇಬ್ಬರು ಪಕ್ಷೇತರ ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಕಾರ್ಕಳ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ ವಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಕಾರ್ಕಳ ತಾಲೂಕಿನ ಮಾಳ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಶನಿವಾರ ನಡೆಯಿತು ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ಪೂಜಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿಮಲಾ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ 15 ಸದಸ್ಯ ಬಲದಲ್ಲಿ ಚುನಾವಣೆಯಲ್ಲಿ 13 ಜನ ಸದಸ್ಯರು ಭಾಗಿಯಾಗಿದ್ದು ಬಿಜೆಪಿ ಬೆಂಬಲಿತ ಆಡಳಿತ ಮುಂದುವರಿದಿದೆ.

ರೆಂಜಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ರಮೇಶ ಶೆಟ್ಟಿ ಉಪಾಧ್ಯಕ್ಷರಾಗಿ ಪುಷ್ಪ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ 8 ಮಂದಿ ಸದಸ್ಯರಿರುವ ರೆಂಜಾಳ ಪಂಚಾಯತ್ ನಲ್ಲಿ ಏಳು ಮಂದಿ ಬಿಜೆಪಿ ಬೆಂಬಲಿತ ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಮೀಸಲಾತಿ ನಿಗದಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಕೆಟಗರಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಚುನಾವಣಾ ಪ್ರಕ್ರಿಯೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ಶಿವಾನಂದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪೂಜಾ ಉಪಾಧ್ಯಕ್ಷರಾಗಿ ಹರಿಜೀವನ್ ಶೆಟ್ಟಿ ಆಯ್ಕೆ ಆಗಿದ್ದಾರೆ.
10 ಮಂದಿ ಸದಸ್ಯರಿರುವ ಕಲ್ಯಾ ಗ್ರಾಮ ಪಂಚಾಯಿತಿನಲ್ಲಿ ಎಲ್ಲರೂ ಬಿಜೆಪಿ ಬೆಂಬಲಿತರಾಗಿದ್ದು, ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಬಿ) ಕೆಟಗರಿಗೆ ನಿಗದಿಯಾಗಿತ್ತು. ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಸೋಮಶೇಖರ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಮಿಯ್ಯಾರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸನ್ಮತಿ ನಾಯಕ್ ಉಪಾಧ್ಯಕ್ಷರಾಗಿ ಶ್ರೀದೇವಿ ಆಯ್ಕೆಯಾಗಿದ್ದಾರೆ.ಮಿಯ್ಯಾರು ಗ್ರಾಮ ಪಂಚಾಯಿತಿನಲ್ಲಿ ಒಟ್ಟು 19 ಸದಸ್ಯರಿದ್ದು 12 ಮಂದಿ ಬಿಜೆಪಿ ಹಾಗೂ 7 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದರು. ಬಳಿಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡೇನಿಯಲ್ ರೇಂಜರ್ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಕೆಟಗರಿಗೆ ನಿಗದಿಯಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸನ್ಮತಿ ನಾಯಕ್ ಹಾಗೂ ಕಾಂಗ್ರೆಸ್ ಬೆಂಬಲಿತ ಗೀತಾ (ಸೀತ) ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ನಡೆದು ಸನ್ಮತಿಯವರು 11 ಮತ ಪಡೆದರೆ ಗೀತಾ ಅವರು 7 ಮತ ಪಡೆದು ಸನ್ಮತಿ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ಹಾಗೂ ಡೇನಿಯಲ್ ಅವರು ಸ್ಪರ್ಧಿಸಿದ್ದು ಶ್ರೀದೇವಿ ಅವರು 11 ಮತಗಳನ್ನು ಪಡೆದರೆ ಡೇನಿಯಲ್ 7 ಮತಗಳನ್ನು ಪಡೆದು ಶ್ರೀದೇವಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಂದ್ರನಾಥ್ ಎಂ.ವಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಮುಂಡ್ಕೂರು: ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಪ್ಪ ಸಫಲಿಗ ಹಾಗೂ ಉಪಾಧ್ಯಕ್ಷರಾಗಿ ಸುಶೀಲಾ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 18 ಸದಸ್ಯ ಬಲದ ಮುಂಡ್ಕೂರು ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಹಾಗೂ 4 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು ಈ ಪೈಕಿ ಅಧ್ಯಕ್ಷ ಸ್ಥಾನದ ಮೀಸಲಾತಿಯು ಹಿಂದುಳಿದ ವರ್ಗ (ಎ) ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ (ಮಹಿಳೆ) ಗೆ ಮಿಸಲಾಗಿತ್ತು. ಚುನಾವಣೆ ಅಧಿಕಾರಿಯಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಕಾರಿ ಅಭಿಯಂತರ ಸದಾನಂದ ನಾಯ್ಕ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು

Leave a Reply

Your email address will not be published. Required fields are marked *