ಕಾರ್ಕಳ: ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಕೃಷ್ಣಾನಂದ ಶೆಟ್ಟಿ ಅವರು ತುರ್ತುಚಿಕಿತ್ಸಾ ವೈದ್ಯರಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ವರ್ಗಾವಣೆಗೊಂಡಿದ್ದಾರೆ.
ಮೂಲತಃ ಉತ್ತರಕನ್ನಡ ಜಿಲ್ಲೆಯವರಾದ ಡಾ.ಕೃಷ್ಣಾನಂದ ಶೆಟ್ಟಿ ಕಳೆದ 13 ವರ್ಷಗಳಿಂದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು.
ಡಾ.ಕೃಷ್ಣಾನಂದ ಶೆಟ್ಟಿಯವರ ವರ್ಗಾವಣೆಯಿಂದ ತೆರವಾದ ಆರೋಗ್ಯಾಧಿಕಾರಿ ಹುದ್ದೆಗೆ ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರುಣಾ ಅವರು ಪ್ರಭಾರ ಆರೋಗ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.