ಕಾರ್ಕಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮಕ್ಕೆ ತಾಲೂಕು ಕಚೇರಿಯಲ್ಲಿ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು.
ತಹಶಿಲ್ದಾರ್ ಅನಂತ ಶಂಕರ ಬಿ ಸಂವಿಧಾನ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಸತಿ ನಿಲಯದ ವಾರ್ಡನ್ ಚೇತನಾ ಜಯಕರ ಶೆಟ್ಟಿ ಸಂವಿಧಾನದ ಪೀಠಿಕೆಯನ್ನು ಓದಿದರು.
ಈ ಸಂದರ್ಭದಲ್ಲಿ ಕಾರ್ಕಳ ಪೊಲೀಸ್ ಉಪನಿರೀಕ್ಷರಕರಾದ ಅರವಿಂದ ಕಲಗುಜ್ಜಿ, ಪೊಲೀಸ್ ಅಧೀಕ್ಷಕ ಕುಮಾರ ಬಿ ನಾಯ್ಕ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




