ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ 30 ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 20 ವಿದ್ಯಾರ್ಥಿಗಳು ಶೇ.90% ಕ್ಕಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 581 ಅಂಕ ಪಡೆದ ಮಾನ್ಯ ಶೆಟ್ಟಿ ಪ್ರಥಮ ಸ್ಥಾನ, 579 ಅಂಕ ಪಡೆದ ಚೈತನ್ಯ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿಜ್ಙಾನ ವಿಭಾಗದಲ್ಲಿ 577 ಅಂಕ ಪಡೆದ ನಿನಾದ್ ಪ್ರಭು ಪ್ರಥಮ ಸ್ಥಾನಿಯಾದರೆ, 575 ಅಂಕ ಪಡೆದ ತಾನಿಯ ಬೇಗಂ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.