ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರ ಮನವೊಲಿಸಿದ ಮುಖ್ಯಾಧಿಕಾರಿ ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಅಶ್ಫಕ್ ಅಹಮ್ಮದ್, ಸದಸ್ಯರುಗಳಾದ ಶುಭದರಾವ್, ಪ್ರವೀಣ್ ಶೆಟ್ಟಿ, ಹರೀಶ್ ಕುಮಾರ್, ಪ್ರತಿಮಾ ರಾಣೆ, ಪ್ರಭಾ ಕಿಶೋರ್, ರೆಹಮತ್ ಮೊದಲಾದವರು ಉಪಸ್ಥಿತರಿದ್ದರು