ಕಾರ್ಕಳ : ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾವಂತ ಜೊತೆಗೆ ಸಂಸ್ಕಾರವAತರಾಗಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಕಾರ್ಕಳದ ಉಮಿಕ್ಕಳ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ “ಪರಶುರಾಮ” ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಂಚಾಲಕರಾದ ಕೆ.ಪಿ.ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳಾಗುವಂತೆ ಕರೆ ನೀಡಿದರು.
ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ.ಗಣನಾಥ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.
ಈ ಸಂದರ್ಭದಲ್ಲಿ ಬಿಲ್ಲವ ಯುವ ಬ್ರಿಗೇಡ್ ನ ಅಧ್ಯಕ್ಷ ಭರತ್ ಅಂಚನ್, ಖ್ಯಾತ ರಂಗನಿರ್ದೇಶಕ ಡಾ.ಜೀವನ್ ರಾಂ ಸುಳ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮೇಲ್ವಿಚಾರಕರಾದ ಶ್ರೀಮತಿ ಸೌಮ್ಯ ಶೆಟ್ಟಿ, ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ಗಣಪತಿ ಭಟ್, ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್, ಆದರ್ಶ ಎಂ. ಕೆ, ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಲೋಹಿತ್ ಎಸ್. ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.