ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆಯ ಸಂದರ್ಭ ವೈಶಾಕ್ ಚಿಪ್ಳೂಣ್‌ಕರ್ ಮಾಳ, ಪ್ರಭಾಕರ್ ಶೆಟ್ಟಿ, ಪಳ್ಳಿ ನಿಂಜೂರು ಅಭಿನಂದನ್ ಶೆಟ್ಟಿ ನೇತೃತ್ವದಲ್ಲಿ ಸುಮಾರು 3೦ ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಎರ್ಲಪಾಡಿಯ ಬೋಜ ಶೆಟ್ಟಿಯ ನೇತೃತ್ವದಲ್ಲಿ ಸುಮಾರು 1೦ ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಕಾAಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.