ಕಾರ್ಕಳ: ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲು ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷ ಬಿಜೆಪಿ ಹಿರಿಯ ಮುಖಂಡ ಆನಂದ ಪೂಜಾರಿ, ಉದ್ಯಮಿ ಬಿಜೆಪಿ ಮುಖಂಡ ಕಾಂತಾವರ ಉದಯ್ ಶೆಟ್ಟಿ. ಕುಕ್ಕುಂದೂರು ಪಂಚಾಯತ್ ಸದಸ್ಯ ರಮೇಶ್, ಅನೇಕ ಗ್ರಾಮಗಳ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.