ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 2 ರಿಂದ 12 ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನವನ್ನು ನಿಟ್ಟೆ ಗ್ರಾಮದ ಚೇತನಹಳ್ಳಿ ಕಾಲನಿಯ ಬೂತ್ ಅದ್ಯಕ್ಷ ಹರಿಶ್ಚಂದ್ರ ರವರ ಮನೆಯಲ್ಲಿ ಧ್ವಜವನ್ನು ಹಾರಿಸುವುದರ ಮೂಲಕ ಇಂಧನ ಮತ್ತು ಕನ್ನಡ ಸಂಸೃತಿ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ , ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ,ಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಹೆಗ್ಡೆ , ಪಂಚಾಯತ್ ಅದ್ಯಕ್ಷ ಸತೀಶ್, ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.